Joel · chapter 1 · verse 5
Joel 1:5 in Kannada
ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
Amaleridavare, neevu echchattu aliri; draakshaarasa kudiyuvavarellare, hosa draakshaa rasada nimitta golaadiri; adu nimma baayi yolaginda tegeyalpattide.
Joel 1:5 in English
- King James Version (KJV)
- Awake, ye drunkards, and weep; and howl, all ye drinkers of wine, because of the new wine; for it is cut off from your mouth.
- World English Bible (WEB)
- Wake up, you drunkards, and weep! Wail, all you drinkers of wine, because of the sweet wine, for it is cut off from your mouth.
- American Standard Version (ASV)
- Awake, ye drunkards, and weep; and wail, all ye drinkers of wine, because of the sweet wine; for it is cut off from your mouth.
- Bible in Basic English (BBE)
- Come out of your sleep, you who are overcome with wine, and give yourselves to weeping; give cries of sorrow, all you drinkers of wine, because of the sweet wine; for it has been cut off from your mouths.
- Darby Translation (DBY)
- Awake, ye drunkards, and weep; and howl, all ye drinkers of wine, because of the new wine: for it is cut off from your mouth.
- Webster's Bible (WBS)
- Awake, ye drunkards, and weep; and howl, all ye drinkers of wine, because of the new wine; for it is cut off from your mouth.
- Young's Literal Translation (YLT)
- Awake, ye drunkards, and weep, And howl all drinking wine, because of the juice, For it hath been cut off from your mouth.
Read in context
- 3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- 4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- 5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- 6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
- 7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
Cross references
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- Luke 21:34–36 ಲೂಕನು 21:34–36ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Isaiah 32:10–12 ಯೆಶಾಯ 32:10–12ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ. ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
- Jeremiah 4:8 ಯೆರೆಮೀಯ 4:8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- Amos 6:3–7 ಆಮೋಸ 6:3–7ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- Isaiah 24:7–11 ಯೆಶಾಯ 24:7–11ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Romans 13:11–14 ರೋಮಾಪುರದವರಿಗೆ 13:11–14ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Luke 16:23–25 ಲೂಕನು 16:23–25ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- Joel 3:3 ಯೋವೇಲ 3:3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- Ezekiel 30:2 ಯೆಹೆಜ್ಕೇಲನು 30:2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.