Joel · chapter 1 · verse 6
Joel 1:6 in Kannada
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
Nanna deshada mele ondu janaangavu eri bantu; adu balavaadaddoo lekkavilladdoo; adara hallugalu sinhada hallugalu, dodda sinhada davade hallugalu adakke untu.
Joel 1:6 in English
- King James Version (KJV)
- For a nation is come up upon my land, strong, and without number, whose teeth [are] the teeth of a lion, and he hath the cheek teeth of a great lion.
- World English Bible (WEB)
- For a nation has come up on my land, strong, and without number. His teeth are the teeth of a lion, and he has the fangs of a lioness.
- American Standard Version (ASV)
- For a nation is come up upon my land, strong, and without number; his teeth are the teeth of a lion, and he hath the jaw-teeth of a lioness.
- Bible in Basic English (BBE)
- For a nation has come up over my land, strong and without number; his teeth are the teeth of a lion, and he has the back teeth of a great lion.
- Darby Translation (DBY)
- For a nation is come up upon my land, strong and without number: his teeth are the teeth of a lion, and he hath the cheek teeth of a lioness.
- Webster's Bible (WBS)
- For a nation is come up upon my land, strong, and without number, whose teeth [are] the teeth of a lion, and he hath the cheek teeth of a great lion.
- Young's Literal Translation (YLT)
- For a nation hath come up on my land, Strong, and there is no number, Its teeth [are] the teeth of a lion, And it hath the jaw-teeth of a lioness.
Read in context
- 4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- 5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- 6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
- 7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- 8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
Cross references
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Revelation 9:7–10 ಪ್ರಕಟನೆ 9:7–10ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- Joel 2:2–11 ಯೋವೇಲ 2:2–11ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Isaiah 32:13 ಯೆಶಾಯ 32:13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
- Proverbs 30:25–27 ಜ್ಞಾನೋಕ್ತಿಗಳು 30:25–27ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ. ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ. ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.