Joel · chapter 1 · verse 8
Joel 1:8 in Kannada
ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
Yauvanada gandanigoskara goneetattu dharisida kanyeya haage pralaapisu.
Joel 1:8 in English
- King James Version (KJV)
- Lament like a virgin girded with sackcloth for the husband of her youth.
- World English Bible (WEB)
- Mourn like a virgin dressed in sackcloth for the husband of her youth!
- American Standard Version (ASV)
- Lament like a virgin girded with sackcloth for the husband of her youth.
- Bible in Basic English (BBE)
- Make sounds of grief like a virgin dressed in haircloth for the husband of her early years.
- Darby Translation (DBY)
- Wail like a virgin girded with sackcloth for the husband of her youth.
- Webster's Bible (WBS)
- Lament like a virgin girded with sackcloth for the husband of her youth.
- Young's Literal Translation (YLT)
- Wail, as a virgin girdeth with sackcloth, For the husband of her youth.
Read in context
- 6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
- 7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- 8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
- 9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- 10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
Cross references
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- Jeremiah 3:4 ಯೆರೆಮೀಯ 3:4ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
- Proverbs 2:17 ಜ್ಞಾನೋಕ್ತಿಗಳು 2:17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- Isaiah 24:7–12 ಯೆಶಾಯ 24:7–12ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Isaiah 32:11 ಯೆಶಾಯ 32:11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Joel 1:13–15 ಯೋವೇಲ 1:13–15ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ. ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ. ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- James 4:8–9 ಯಾಕೋಬನು 4:8–9ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
- Jeremiah 9:17–19 ಯೆರೆಮೀಯ 9:17–19ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
- Joel 2:12–14 ಯೋವೇಲ 2:12–14ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?