Joel · chapter 2 · verse 25
Joel 2:25 in Kannada
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
Naanu nimmalli kaluhisadantha, nanna dodda sainyavaada hulavoo kambali hulavoo olage naashamaaduva hulavoo midategaloo tinda varushagalige badalaagi nimage koduvenu.
Joel 2:25 in English
- King James Version (KJV)
- And I will restore to you the years that the locust hath eaten, the cankerworm, and the caterpiller, and the palmerworm, my great army which I sent among you.
- World English Bible (WEB)
- I will restore to you the years that the swarming locust has eaten, the great locust, the grasshopper, and the caterpillar, my great army, which I sent among you.
- American Standard Version (ASV)
- And I will restore to you the years that the locust hath eaten, the canker-worm, and the caterpillar, and the palmer-worm, my great army which I sent among you.
- Bible in Basic English (BBE)
- I will give back to you the years which were food for the locust, the plant-worm, the field-fly, and the worm, my great army which I sent among you.
- Darby Translation (DBY)
- And I will restore to you the years that the locust hath eaten, the cankerworm, and the caterpillar, and the palmer-worm, my great army which I sent among you.
- Webster's Bible (WBS)
- And I will restore to you the years that the locust hath eaten, the canker-worm, and the caterpillar, and the palmer-worm, my great army which I sent among you.
- Young's Literal Translation (YLT)
- And I have recompensed to you the years That consume did the locust, the cankerworm, And the caterpillar, and the palmer-worm, My great force that I did send against you.
Read in context
- 23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- 24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
- 25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- 26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
Cross references
- Zechariah 10:6 ಜೆಕರ್ಯ 10:6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Joel 2:2–11 ಯೋವೇಲ 2:2–11ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?