Joel · chapter 3 · verse 11
Joel 3:11 in Kannada
ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
Suttalina ellaa anyajanaanga gale, koodikolliri; o kartane, ninna shoorarannu alli iliya maadu.
Joel 3:11 in English
- King James Version (KJV)
- Assemble yourselves, and come, all ye heathen, and gather yourselves together round about: thither cause thy mighty ones to come down, O LORD.
- World English Bible (WEB)
- Hurry and come, all you surrounding nations, and gather yourselves together.” Cause your mighty ones to come down there, LORD.
- American Standard Version (ASV)
- Haste ye, and come, all ye nations round about, and gather yourselves together: thither cause thy mighty ones to come down, O Jehovah.
- Bible in Basic English (BBE)
- Come quickly, all you nations round about, and get yourselves together there: make your strong ones come down, O Lord.
- Darby Translation (DBY)
- Haste ye and come, all ye nations round about, and gather yourselves together. Thither cause thy mighty ones to come down, O Jehovah.
- Webster's Bible (WBS)
- Assemble yourselves, and come, all ye heathen, and gather yourselves together around: thither cause thy mighty ones to come down, O LORD.
- Young's Literal Translation (YLT)
- Haste, and come in, all ye nations round, And be gathered together, Thither cause to come down, O Jehovah, Thy mighty ones.
Read in context
- 9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- 10ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
- 11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- 12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- 13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
Cross references
- Isaiah 13:3 ಯೆಶಾಯ 13:3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Revelation 19:14 ಪ್ರಕಟನೆ 19:14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Revelation 16:14–16 ಪ್ರಕಟನೆ 16:14–16ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Ezekiel 38:9–18 ಯೆಹೆಜ್ಕೇಲನು 38:9–18ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Revelation 19:19–20 ಪ್ರಕಟನೆ 19:19–20ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Micah 4:12 ಮೀಕ 4:12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Revelation 20:8–9 ಪ್ರಕಟನೆ 20:8–9ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- Zechariah 14:2–3 ಜೆಕರ್ಯ 14:2–3ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.