Joel · chapter 3 · verse 13
Joel 3:13 in Kannada
ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
Kudugolannu haakiri, bele pakvavaayitu; bandu iliyiri; draaksheya ale tumbi ade; tottigalu tulukuttave; avara kettatanavu bahalavaagide.
Joel 3:13 in English
- King James Version (KJV)
- Put ye in the sickle, for the harvest is ripe: come, get you down; for the press is full, the fats overflow; for their wickedness [is] great.
- World English Bible (WEB)
- Put in the sickle; for the harvest is ripe. Come, tread, for the wine press is full, the vats overflow, for their wickedness is great.”
- American Standard Version (ASV)
- Put ye in the sickle; for the harvest is ripe: come, tread ye; for the winepress is full, the vats overflow; for their wickedness is great.
- Bible in Basic English (BBE)
- Put in the blade, for the grain is ready: come, get you down, for the wine-crusher is full, the vessels are overflowing; for great is their evil-doing.
- Darby Translation (DBY)
- Put in the sickle, for the harvest is ripe: come, get you down, for the press is full, the vats overflow; for their wickedness is great.
- Webster's Bible (WBS)
- Put ye in the sickle, for the harvest is ripe: come, go down; for the press is full, the vats overflow; for their wickedness [is] great.
- Young's Literal Translation (YLT)
- Send ye forth a sickle, For ripened hath harvest, Come in, come down, for filled hath been the press, Overflowed hath wine-presses, For great [is] their wickedness.
Read in context
- 11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- 12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- 13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- 14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- 15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
Cross references
- Revelation 14:15–20 ಪ್ರಕಟನೆ 14:15–20ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Mark 4:29 ಮಾರ್ಕನು 4:29ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
- Hosea 6:11 ಹೋಶೇಯ 6:11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- Matthew 13:39 ಮತ್ತಾಯನು 13:39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- Deuteronomy 16:9 ಧರ್ಮೋಪದೇಶಕಾಂಡ 16:9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- Genesis 18:20 ಆದಿಕಾಂಡ 18:20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Genesis 15:16 ಆದಿಕಾಂಡ 15:16ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.