Joel · chapter 3 · verse 18
Joel 3:18 in Kannada
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
Aa dinadalli aaguvadenam dare, bettagalu hosa draakshaarasavannu suriyuvavu; guddagalu haalininda hariyuvavu; yehoodada hallagalellaa neerininda hariyuvavu; kartana aalayadolaginda bugge horatu, shitteemina taggige jala koduvadu.
Joel 3:18 in English
- King James Version (KJV)
- And it shall come to pass in that day, [that] the mountains shall drop down new wine, and the hills shall flow with milk, and all the rivers of Judah shall flow with waters, and a fountain shall come forth of the house of the LORD, and shall water the valley of Shittim.
- World English Bible (WEB)
- It will happen in that day, that the mountains will drop down sweet wine, the hills will flow with milk, all the brooks of Judah will flow with waters; and a fountain will flow out from the LORD’s house, and will water the valley of Shittim.
- American Standard Version (ASV)
- And it shall come to pass in that day, that the mountains shall drop down sweet wine, and the hills shall flow with milk, and all the brooks of Judah shall flow with waters; and a fountain shall come forth from the house of Jehovah, and shall water the valley of Shittim.
- Bible in Basic English (BBE)
- And it will come about in that day that the mountains will be dropping sweet wine, and the hills will be flowing with milk, and all the streams of Judah will be flowing with water; and a fountain will come out from the house of the Lord, watering the valley of acacia-trees.
- Darby Translation (DBY)
- And it shall come to pass in that day, that the mountains shall drop down new wine, and the hills shall flow with milk, and all the water-courses of Judah shall flow with waters; and a fountain shall come forth from the house of Jehovah, and shall water the valley of Shittim.
- Webster's Bible (WBS)
- And it shall come to pass in that day, [that] the mountains shall drop down new wine, and the hills shall flow with milk, and all the rivers of Judah shall flow with waters, and a fountain shall come forth from the house of the LORD, and shall water the valley of Shittim.
- Young's Literal Translation (YLT)
- And it hath come to pass, in that day, Drop down do the mountains juice, And the hills do flow [with] milk, And all streams of Judah do go [with] water, And a fountain from the house of Jehovah goeth forth, And hath watered the valley of Shittim.
Read in context
- 16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- 17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- 18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
- 19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
- 20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Cross references
- Ezekiel 47:1–12 ಯೆಹೆಜ್ಕೇಲನು 47:1–12ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು. ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು. ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4 ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು. ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Revelation 22:1–2 ಪ್ರಕಟನೆ 22:1–2ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು. ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Zechariah 14:8 ಜೆಕರ್ಯ 14:8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
- Amos 9:13–14 ಆಮೋಸ 9:13–14ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Numbers 25:1 ಅರಣ್ಯಕಾಂಡ 25:1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- Isaiah 30:25 ಯೆಶಾಯ 30:25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
- Isaiah 41:17–18 ಯೆಶಾಯ 41:17–18ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Job 29:6 ಯೋಬನು 29:6ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Original words (Hebrew)
- day · H3117יוֹם yôwm
- mountains · H2022הַר har
- down · H5197נָטַף nâṭaph
- wine · H6071עָסִיס ʻâçîyç
- hills · H1389גִּבְעָה gibʻâh
- flow · H3212יָלַךְ yâlak
- milk · H2461חָלָב châlâb
- rivers · H650אָפִיק ʼâphîyq
- Judah · H3063יְהוּדָה Yᵉhûwdâh
- flow · H3212יָלַךְ yâlak
- waters · H4325מַיִם mayim
- fountain · H4599מַעְיָן maʻyân
- forth · H3318יָצָא yâtsâʼ
- house · H1004בַּיִת bayith
- water · H8248שָׁקָה shâqâh
- valley · H5158נַחַל nachal
- Shittim · H7851שִׁטִּים Shiṭṭîym