Joel · chapter 3 · verse 4
Joel 3:4 in Kannada
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Haudu, o toore, cheedone, paalestinada ellaa praantyagale, nanna kooda nimagenu? Nanage muyyige muyyi sallisuviro? Neevu nanage sallisidare jaagrateyaagiyoo tvareyaagiyoo nimma taleya mele muyyige muyyi tarisuvenu.
Joel 3:4 in English
- King James Version (KJV)
- Yea, and what have ye to do with me, O Tyre, and Zidon, and all the coasts of Palestine? will ye render me a recompence? and if ye recompense me, swiftly [and] speedily will I return your recompence upon your own head;
- World English Bible (WEB)
- “Yes, and what are you to me, Tyre and Sidon, and all the regions of Philistia? Will you repay me? And if you repay me, I will swiftly and speedily return your repayment on your own head.
- American Standard Version (ASV)
- Yea, and what are ye to me, O Tyre, and Sidon, and all the regions of Philistia? will ye render me a recompense? and if ye recompense me, swiftly and speedily will I return your recompense upon your own head.
- Bible in Basic English (BBE)
- And further, what are you to me, O Tyre and Zidon and all the circle of Philistia? will you give me back any payment? and if you do, quickly and suddenly I will send it back on your head,
- Darby Translation (DBY)
- Yea also, what have ye to do with me, O Tyre and Zidon, and all the districts of Philistia? Will ye render me a recompence? But if ye recompense me, swiftly [and] speedily will I bring your recompence upon your own head;
- Webster's Bible (WBS)
- Yes, and what have ye to do with me, O Tyre, and Zidon, and all the coasts of Palestine? will ye render me a recompense? and if ye recompense me, swiftly [and] speedily I will return your recompense upon your own head;
- Young's Literal Translation (YLT)
- And also, what [are] ye to Me, O Tyre and Zidon, And all circuits of Philistia? Recompence are ye rendering unto Me? And if ye are giving recompence to Me, Swiftly, hastily, I turn back your recompence on your head.
Read in context
- 2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- 3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- 4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- 5ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
- 6ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
Cross references
- Amos 1:6–10 ಆಮೋಸ 1:6–10ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು. ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು. ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು. ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- Jeremiah 47:4 ಯೆರೆಮೀಯ 47:4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- Isaiah 34:8 ಯೆಶಾಯ 34:8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Isaiah 59:18 ಯೆಶಾಯ 59:18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Ezekiel 25:12–17 ಯೆಹೆಜ್ಕೇಲನು 25:12–17ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು. ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Isaiah 23:1–2 ಯೆಶಾಯ 23:1–2ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- Zechariah 9:2–8 ಜೆಕರ್ಯ 9:2–8ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ. ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು. ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು. ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು. ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು. ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- 2 Chronicles 21:16 2 ಪೂರ್ವಕಾಲವೃತ್ತಾಂತ 21:16ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Judges 11:12 ನ್ಯಾಯಸ್ಥಾಪಕರು 11:12ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
Original words (Hebrew)
- Tyre · H6865צֹר Tsôr
- Zidon · H6721צִידוֹן Tsîydôwn
- coasts · H1552גְלִילָה gᵉlîylâh
- Palestine · H6429פְּלֶשֶׁת Pᵉlesheth
- render · H7999שָׁלַם shâlam
- recompence · H1576גְּמוּל gᵉmûwl
- recompense · H1580גָּמַל gâmal
- swiftly · H7031קַל qal
- speedily · H4120מְהֵרָה mᵉhêrâh
- return · H7725שׁוּב shûwb
- recompence · H1576גְּמוּל gᵉmûwl
- head · H7218רֹאשׁ rôʼsh