John · chapter 1 · verse 17
John 1:17 in Kannada
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
Nyaayapramaanavu mosheya mukhaantara vaagi kodalpattitu; aadare krupeyoo satyavoo yesu kristana mukhaantaravaagi bandavu.
John 1:17 in English
- King James Version (KJV)
- For the law was given by Moses, [but] grace and truth came by Jesus Christ.
- World English Bible (WEB)
- For the law was given through Moses. Grace and truth were realized through Jesus Christ.
- American Standard Version (ASV)
- For the law was given through Moses; grace and truth came through Jesus Christ.
- Bible in Basic English (BBE)
- For the law was given through Moses; grace and the true way of life are ours through Jesus Christ.
- Darby Translation (DBY)
- For the law was given by Moses: grace and truth subsists through Jesus Christ.
- Webster's Bible (WBS)
- For the law was given by Moses, [but] grace and truth came by Jesus Christ.
- Young's Literal Translation (YLT)
- for the law through Moses was given, the grace and the truth through Jesus Christ did come;
Read in context
- 15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
- 16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- 17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- 18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- 19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
Cross references
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Romans 3:19–26 ರೋಮಾಪುರದವರಿಗೆ 3:19–26ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- John 8:32 ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- John 7:19 ಯೋಹಾನನು 7:19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- 2 Corinthians 3:7–10 2 ಕೊರಿಂಥದವರಿಗೆ 3:7–10ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
- Hebrews 3:5–6 ಇಬ್ರಿಯರಿಗೆ 3:5–6ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Galatians 3:10–13 ಗಲಾತ್ಯದವರಿಗೆ 3:10–13ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Hebrews 10:4–10 ಇಬ್ರಿಯರಿಗೆ 10:4–10ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.