John · chapter 1 · verse 44
John 1:44 in Kannada
ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
Philippanu andreyana mattu petrana pattanavaada betsaayi davanu.
John 1:44 in English
- King James Version (KJV)
- Now Philip was of Bethsaida, the city of Andrew and Peter.
- World English Bible (WEB)
- Now Philip was from Bethsaida, the city of Andrew and Peter.
- American Standard Version (ASV)
- Now Philip was from Bethsaida, of the city of Andrew and Peter.
- Bible in Basic English (BBE)
- Now Philip's town was Beth-saida, where Andrew and Peter came from.
- Darby Translation (DBY)
- And Philip was from Bethsaida, of the city of Andrew and Peter.
- Webster's Bible (WBS)
- Now Philip was of Bethsaida, the city of Andrew and Peter.
- Young's Literal Translation (YLT)
- And Philip was from Bethsaida, of the city of Andrew and Peter;
Read in context
- 4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- 43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
- 45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- 46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
Cross references
- John 12:21 ಯೋಹಾನನು 12:21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- Luke 10:13 ಲೂಕನು 10:13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Mark 8:22 ಮಾರ್ಕನು 8:22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
- Matthew 10:3 ಮತ್ತಾಯನು 10:3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- Luke 9:10 ಲೂಕನು 9:10ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
- Mark 6:45 ಮಾರ್ಕನು 6:45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- John 14:8–9 ಯೋಹಾನನು 14:8–9ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Luke 6:14 ಲೂಕನು 6:14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,