John · chapter 1 · verse 51
John 1:51 in Kannada
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Aatanu avanige--ninage nijanijavaagi heluttene. Indininda paralokavu terediruvadannoo devadootaru manushyakumaarana mele eruvadannoo iliyuvadannoo neevu noduviri andanu.
John 1:51 in English
- King James Version (KJV)
- And he saith unto him, Verily, verily, I say unto you, Hereafter ye shall see heaven open, and the angels of God ascending and descending upon the Son of man.
- World English Bible (WEB)
- He said to him, “Most certainly, I tell you all, hereafter you will see heaven opened, and the angels of God ascending and descending on the Son of Man.”
- American Standard Version (ASV)
- And he saith unto him, Verily, verily, I say unto you, Ye shall see the heaven opened, and the angels of God ascending and descending upon the Son of man.
- Bible in Basic English (BBE)
- And he said to him, Truly I say to you all, You will see heaven opening and God's angels going up and coming down on the Son of man.
- Darby Translation (DBY)
- And he says to him, Verily, verily, I say to you, Henceforth ye shall see the heaven opened, and the angels of God ascending and descending on the Son of man.
- Webster's Bible (WBS)
- And he saith to him, Verily, verily, I say to you, Hereafter ye shall see heaven open, and the angels of God ascending and descending upon the Son of man.
- Young's Literal Translation (YLT)
- and he saith to him, 'Verily, verily, I say to you, henceforth ye shall see the heaven opened, and the messengers of God going up and coming down upon the Son of Man.'
Read in context
- 49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- 50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- 51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Cross references
- Genesis 28:12 ಆದಿಕಾಂಡ 28:12ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
- Acts 7:56 ಅಪೊಸ್ತಲರ ಕೃತ್ಯಗಳು 7:56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
- Matthew 16:27–28 ಮತ್ತಾಯನು 16:27–28ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು. ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Luke 22:43 ಲೂಕನು 22:43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- Mark 1:10 ಮಾರ್ಕನು 1:10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
- Acts 10:11 ಅಪೊಸ್ತಲರ ಕೃತ್ಯಗಳು 10:11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
- Luke 2:13 ಲೂಕನು 2:13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
- Mark 14:62 ಮಾರ್ಕನು 14:62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- Ezekiel 1:1 ಯೆಹೆಜ್ಕೇಲನು 1:1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- Luke 3:21 ಲೂಕನು 3:21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
- John 3:13–14 ಯೋಹಾನನು 3:13–14ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ. ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
- Matthew 3:16 ಮತ್ತಾಯನು 3:16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.