John · chapter 1 · verse 6
John 1:6 in Kannada
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
Devarinda kaluhi salpatta obba manushyaniddanu; avana hesaru yohaananu.
John 1:6 in English
- King James Version (KJV)
- There was a man sent from God, whose name [was] John.
- World English Bible (WEB)
- There came a man sent from God, whose name was John.
- American Standard Version (ASV)
- There came a man, sent from God, whose name was John.
- Bible in Basic English (BBE)
- There was a man sent from God, whose name was John.
- Darby Translation (DBY)
- There was a man sent from God, his name John.
- Webster's Bible (WBS)
- There was a man sent from God, whose name [was] John.
- Young's Literal Translation (YLT)
- There came a man — having been sent from God — whose name [is] John,
Read in context
- 4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- 6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
- 7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- 8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- John 3:28 ಯೋಹಾನನು 3:28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
- Isaiah 40:3–5 ಯೆಶಾಯ 40:3–5ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Acts 13:24 ಅಪೊಸ್ತಲರ ಕೃತ್ಯಗಳು 13:24ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- John 1:33 ಯೋಹಾನನು 1:33ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
- Matthew 3:1–11 ಮತ್ತಾಯನು 3:1–11ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು. ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Mark 1:1–8 ಮಾರ್ಕನು 1:1–8ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು. ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು. ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು. ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- Matthew 11:10 ಮತ್ತಾಯನು 11:10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Luke 3:2–20 ಲೂಕನು 3:2–20ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು? ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು. ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು. ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು. ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.