John · chapter 10 · verse 12
John 10:12 in Kannada
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
Aadare kooliyavanu kurubanallavaadada rindaloo kurigalu tannavugalallavaadadarindaloo tola baruvadannu kandu kurigalannu bittu odi hoguttaane; aaga tolavu kurigalannu hididu kondu avugalannu chadarisuttade.
John 10:12 in English
- King James Version (KJV)
- But he that is an hireling, and not the shepherd, whose own the sheep are not, seeth the wolf coming, and leaveth the sheep, and fleeth: and the wolf catcheth them, and scattereth the sheep.
- World English Bible (WEB)
- He who is a hired hand, and not a shepherd, who doesn’t own the sheep, sees the wolf coming, leaves the sheep, and flees. The wolf snatches the sheep and scatters them.
- American Standard Version (ASV)
- He that is a hireling, and not a shepherd, whose own the sheep are not, beholdeth the wolf coming, and leaveth the sheep, and fleeth, and the wolf snatcheth them, and scattereth [them]:
- Bible in Basic English (BBE)
- He who is a servant, and not the keeper or the owner of the sheep, sees the wolf coming and goes in flight, away from the sheep; and the wolf comes down on them and sends them in all directions:
- Darby Translation (DBY)
- but he who serves for wages, and who is not the shepherd, whose own the sheep are not, sees the wolf coming, and leaves the sheep and flees; and the wolf seizes them and scatters the sheep.
- Webster's Bible (WBS)
- But he that is a hireling, and not the shepherd, whose own the sheep are not, seeth the wolf coming, and leaveth the sheep, and fleeth, and the wolf catcheth them, and scattereth the sheep.
- Young's Literal Translation (YLT)
- and the hireling, and not being a shepherd, whose own the sheep are not, doth behold the wolf coming, and doth leave the sheep, and doth flee; and the wolf catcheth them, and scattereth the sheep;
Read in context
- 10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
- 11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- 12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- 13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
- 14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
Cross references
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Acts 20:29 ಅಪೊಸ್ತಲರ ಕೃತ್ಯಗಳು 20:29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- Zechariah 11:16–17 ಜೆಕರ್ಯ 11:16–17ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Ezekiel 34:2–6 ಯೆಹೆಜ್ಕೇಲನು 34:2–6ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Isaiah 56:10–12 ಯೆಶಾಯ 56:10–12ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- John 10:3 ಯೋಹಾನನು 10:3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ