John · chapter 10 · verse 17
John 10:17 in Kannada
ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
Yaakandare naanu nanna praanavannu tirigipadakolluvante adannu koduttene; aadada rinda nanna tandeyu nannannu preetisuttaane.
John 10:17 in English
- King James Version (KJV)
- Therefore doth my Father love me, because I lay down my life, that I might take it again.
- World English Bible (WEB)
- Therefore the Father loves me, because I lay down my life, that I may take it again.
- American Standard Version (ASV)
- Therefore doth the Father love me, because I lay down my life, that I may take it again.
- Bible in Basic English (BBE)
- For this reason am I loved by the Father, because I give up my life so that I may take it again.
- Darby Translation (DBY)
- On this account the Father loves me, because I lay down my life that I may take it again.
- Webster's Bible (WBS)
- Therefore doth my Father love me, because I lay down my life, that I may take it again.
- Young's Literal Translation (YLT)
- 'Because of this doth the Father love me, because I lay down my life, that again I may take it;
Read in context
- 15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
- 16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- 17ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
- 18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- 19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
Cross references
- John 10:18 ಯೋಹಾನನು 10:18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- John 10:15 ಯೋಹಾನನು 10:15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- John 15:9–10 ಯೋಹಾನನು 15:9–10ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 17:4–5 ಯೋಹಾನನು 17:4–5ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Isaiah 53:7–12 ಯೆಶಾಯ 53:7–12ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 17:24–26 ಯೋಹಾನನು 17:24–26ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ. ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- John 3:25 ಯೋಹಾನನು 3:25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.