John · chapter 10 · verse 18
John 10:18 in Kannada
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
Yaava manushyanaadaroo adannu nanninda tegeyuvadilla; aadare nannashtakke naane adannu koduttene. Naanu adannu koduvadakke nanage adhikaaravide; adannu tirigi padakolluvadakke nanage adhikaaravide. Ee appaneyannu naanu nanna tande yinda hondiddene andanu.
John 10:18 in English
- King James Version (KJV)
- No man taketh it from me, but I lay it down of myself. I have power to lay it down, and I have power to take it again. This commandment have I received of my Father.
- World English Bible (WEB)
- No one takes it away from me, but I lay it down by myself. I have power to lay it down, and I have power to take it again. I received this commandment from my Father.”
- American Standard Version (ASV)
- No one taketh it away from me, but I lay it down of myself. I have power to lay it down, and I have power to take it again. This commandment received I from my Father.
- Bible in Basic English (BBE)
- No one takes it away from me; I give it up of myself. I have power to give it up, and I have power to take it again. These orders I have from my Father.
- Darby Translation (DBY)
- No one takes it from me, but I lay it down of myself. I have authority to lay it down and I have authority to take it again. I have received this commandment of my Father.
- Webster's Bible (WBS)
- No man taketh it from me, but I lay it down of myself. I have power to lay it down, and I have power to take it again. This commandment have I received from my Father.
- Young's Literal Translation (YLT)
- no one doth take it from me, but I lay it down of myself; authority I have to lay it down, and authority I have again to take it; this command I received from my Father.'
Read in context
- 16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- 17ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
- 18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- 19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
- 20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
Cross references
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 10:17 ಯೋಹಾನನು 10:17ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 14:31 ಯೋಹಾನನು 14:31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- Hebrews 5:6–9 ಇಬ್ರಿಯರಿಗೆ 5:6–9ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Philippians 2:6–8 ಫಿಲಿಪ್ಪಿಯವರಿಗೆ 2:6–8ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Hebrews 10:6–10 ಇಬ್ರಿಯರಿಗೆ 10:6–10ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.