John · chapter 10 · verse 25
John 10:25 in Kannada
ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
Yesu avarige--naanu nimage helidenu, aadare neevu nambalilla; nanna tandeya hesarinalli naanu maaduva kriyegale nanna vishayavaagi saakshikoduttave.
John 10:25 in English
- King James Version (KJV)
- Jesus answered them, I told you, and ye believed not: the works that I do in my Father’s name, they bear witness of me.
- World English Bible (WEB)
- Jesus answered them, “I told you, and you don’t believe. The works that I do in my Father’s name, these testify about me.
- American Standard Version (ASV)
- Jesus answered them, I told you, and ye believe not: the works that I do in my Father’s name, these bear witness of me.
- Bible in Basic English (BBE)
- Jesus said in answer, I have said it and you have no belief: the works which I do in my Father's name, these give witness about me.
- Darby Translation (DBY)
- Jesus answered them, I told you, and ye do not believe. The works which I do in my Father's name, these bear witness concerning me:
- Webster's Bible (WBS)
- Jesus answered them, I told you, and ye believed not: the works that I did in my Father's name, they testify concerning me.
- Young's Literal Translation (YLT)
- Jesus answered them, 'I told you, and ye do not believe; the works that I do in the name of my Father, these testify concerning me;
Read in context
- 23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
- 24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- 25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
- 26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
- 27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
Cross references
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 14:11 ಯೋಹಾನನು 14:11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
- John 5:17–43 ಯೋಹಾನನು 5:17–43ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು. ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ. ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ. ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ. ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ. ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ. ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ. ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ. ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.