John · chapter 10 · verse 27
John 10:27 in Kannada
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
Nanna kurigalu nanna svarakke kivigoduttave, naanu avugalannu ballenu; avu nannannu himbaalisuttave.
John 10:27 in English
- King James Version (KJV)
- My sheep hear my voice, and I know them, and they follow me:
- World English Bible (WEB)
- My sheep hear my voice, and I know them, and they follow me.
- American Standard Version (ASV)
- My sheep hear my voice, and I know them, and they follow me:
- Bible in Basic English (BBE)
- My sheep give ear to my voice, and I have knowledge of them, and they come after me:
- Darby Translation (DBY)
- My sheep hear my voice, and I know them, and they follow me;
- Webster's Bible (WBS)
- My sheep hear my voice, and I know them, and they follow me:
- Young's Literal Translation (YLT)
- according as I said to you: My sheep my voice do hear, and I know them, and they follow me,
Read in context
- 25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
- 26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
- 27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- 28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- 29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
Cross references
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- John 10:3–4 ಯೋಹಾನನು 10:3–4ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- John 10:8 ಯೋಹಾನನು 10:8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 8:43 ಯೋಹಾನನು 8:43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.