John · chapter 10 · verse 3
John 10:3 in Kannada
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
Baagalu kaayuvavanu avanige tereyu ttaane; kurigalu avana svaravannu keluttave, avanu tanna svanta kurigalannu hesaru heli karedu avu galannu horage nadisuttaane.
John 10:3 in English
- King James Version (KJV)
- To him the porter openeth; and the sheep hear his voice: and he calleth his own sheep by name, and leadeth them out.
- World English Bible (WEB)
- The gatekeeper opens the gate for him, and the sheep listen to his voice. He calls his own sheep by name and leads them out.
- American Standard Version (ASV)
- To him the porter openeth; and the sheep hear his voice: and he calleth his own sheep by name, and leadeth them out.
- Bible in Basic English (BBE)
- The porter lets him in; and the sheep give ear to his voice; he says over the names of the sheep, and takes them out.
- Darby Translation (DBY)
- To him the porter opens; and the sheep hear his voice; and he calls his own sheep by name, and leads them out.
- Webster's Bible (WBS)
- To him the porter openeth; and the sheep hear his voice: and he calleth his own sheep by name, and leadeth them out.
- Young's Literal Translation (YLT)
- to this one the doorkeeper doth open, and the sheep hear his voice, and his own sheep he doth call by name, and doth lead them forth;
Read in context
- 1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
- 2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
- 3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- 4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- 5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
Cross references
- Ezekiel 34:11–16 ಯೆಹೆಜ್ಕೇಲನು 34:11–16ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- John 10:4 ಯೋಹಾನನು 10:4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Psalm 78:52–53 ಕೀರ್ತನೆಗಳು 78:52–53ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- John 10:26–27 ಯೋಹಾನನು 10:26–27ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Exodus 33:17 ವಿಮೋಚನಕಾಂಡ 33:17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.