John · chapter 11 · verse 1
John 11:1 in Kannada
ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
Mariyala mattu aakeya sahodari yaada maarthala ooraada bethaanya dalli laajaranembavanobbanu asvasthanaagiddanu.
John 11:1 in English
- King James Version (KJV)
- Now a certain [man] was sick, [named] Lazarus, of Bethany, the town of Mary and her sister Martha.
- World English Bible (WEB)
- Now a certain man was sick, Lazarus from Bethany, of the village of Mary and her sister, Martha.
- American Standard Version (ASV)
- Now a certain man was sick, Lazarus of Bethany, of the village of Mary and her sister Martha.
- Bible in Basic English (BBE)
- Now a certain man named Lazarus was ill; he was of Bethany, the town of Mary and her sister Martha.
- Darby Translation (DBY)
- Now there was a certain [man] sick, Lazarus of Bethany, of the village of Mary and Martha her sister.
- Webster's Bible (WBS)
- Now a certain [man] was sick, [named] Lazarus, of Bethany, the town of Mary and her sister Martha.
- Young's Literal Translation (YLT)
- And there was a certain one ailing, Lazarus, from Bethany, of the village of Mary and Martha her sister —
Read in context
- 1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- 2(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
- 3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
Cross references
- John 12:17 ಯೋಹಾನನು 12:17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
- Luke 10:38–42 ಲೂಕನು 10:38–42ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- John 12:9 ಯೋಹಾನನು 12:9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
- 2 Kings 20:1–12 2 ಅರಸುಗಳು 20:1–12ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ-- ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು. ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ-- ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ. ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ. ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು. ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು. ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
- John 11:11 ಯೋಹಾನನು 11:11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- Acts 9:37 ಅಪೊಸ್ತಲರ ಕೃತ್ಯಗಳು 9:37ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- John 11:5–6 ಯೋಹಾನನು 11:5–6ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- Mark 11:1 ಮಾರ್ಕನು 11:1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- Luke 16:20–25 ಲೂಕನು 16:20–25ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- John 12:1–2 ಯೋಹಾನನು 12:1–2ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.