John · chapter 11 · verse 40
John 11:40 in Kannada
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Yesu aakege--neenu nambuvadaadare devara mahimeyannu noduvi endu naanu ninage helalillave andanu.
John 11:40 in English
- King James Version (KJV)
- Jesus saith unto her, Said I not unto thee, that, if thou wouldest believe, thou shouldest see the glory of God?
- World English Bible (WEB)
- Jesus said to her, “Didn’t I tell you that if you believed, you would see God’s glory?”
- American Standard Version (ASV)
- Jesus saith unto her, Said I not unto thee, that, if thou believedst, thou shouldest see the glory of God?
- Bible in Basic English (BBE)
- Jesus said to her, Did I not say to you that if you had faith you would see the glory of God?
- Darby Translation (DBY)
- Jesus says to her, Did I not say to thee, that if thou shouldest believe, thou shouldest see the glory of God?
- Webster's Bible (WBS)
- Jesus saith to her, Said I not to thee, that if thou wouldest believe, thou shouldest see the glory of God?
- Young's Literal Translation (YLT)
- Jesus saith to her, 'Said I not to thee, that if thou mayest believe, thou shalt see the glory of God?'
Read in context
- 38ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- 39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
- 40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- 41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
- 42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
Cross references
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- John 11:23–26 ಯೋಹಾನನು 11:23–26ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು. ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- Romans 4:17–25 ರೋಮಾಪುರದವರಿಗೆ 4:17–25(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Psalm 90:16 ಕೀರ್ತನೆಗಳು 90:16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- John 9:3 ಯೋಹಾನನು 9:3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.