John · chapter 11 · verse 51
John 11:51 in Kannada
ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
Ee maatannu tannashtakke taane maatanaadalilla; aadare avanu aa varushadalli mahaayaajakanaagiddu yesu aa janaangakkoskara maatravallade
John 11:51 in English
- King James Version (KJV)
- And this spake he not of himself: but being high priest that year, he prophesied that Jesus should die for that nation;
- World English Bible (WEB)
- Now he didn’t say this of himself, but being high priest that year, he prophesied that Jesus would die for the nation,
- American Standard Version (ASV)
- Now this he said not of himself: but being high priest that year, he prophesied that Jesus should die for the nation;
- Bible in Basic English (BBE)
- He did not say this of himself, but being the high priest that year he said, as a prophet, that Jesus would be put to death for the nation;
- Darby Translation (DBY)
- But this he did not say of himself; but, being high priest that year, prophesied that Jesus was going to die for the nation;
- Webster's Bible (WBS)
- And this he spoke not of himself: but being high priest that year, he prophesied that Jesus should die for that nation;
- Young's Literal Translation (YLT)
- And this he said not of himself, but being chief priest of that year, he did prophesy that Jesus was about to die for the nation,
Read in context
- 49ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
- 50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- 51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- 52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- 53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- Galatians 4:4–5 ಗಲಾತ್ಯದವರಿಗೆ 4:4–5ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- Numbers 24:14–25 ಅರಣ್ಯಕಾಂಡ 24:14–25ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು. ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು-- ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು. ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು. ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು. ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು. ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Matthew 7:22–23 ಮತ್ತಾಯನು 7:22–23ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Numbers 24:2 ಅರಣ್ಯಕಾಂಡ 24:2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- Judges 20:27–28 ನ್ಯಾಯಸ್ಥಾಪಕರು 20:27–28ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
Original words (Greek)
- And · G1161δέ dé
- this · G5124τοῦτο toûto
- he · G2036ἔπω épō
- not · G3756οὐ ou
- of · G575ἀπό apó
- himself · G1438ἑαυτοῦ heautoû
- but · G235ἀλλά allá
- being · G5607ὤν ṓn
- priest · G749ἀρχιερεύς archiereús
- that · G1565ἐκεῖνος ekeînos
- year · G1763ἐνιαυτός eniautós
- prophesied · G4395προφητεύω prophēteúō
- that · G3754ὅτι hóti
- Jesus · G2424Ἰησοῦς Iēsoûs
- should · G3195μέλλω méllō
- die · G599ἀποθνήσκω apothnḗskō
- for · G5228ὑπέρ hypér
- nation · G1484ἔθνος éthnos