John · chapter 11 · verse 6
John 11:6 in Kannada
ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
Avanu asvasthanaagiddaanendu aatanu keli daroo eradu divasa taanidda sthaladalle ulidanu.
John 11:6 in English
- King James Version (KJV)
- When he had heard therefore that he was sick, he abode two days still in the same place where he was.
- World English Bible (WEB)
- When therefore he heard that he was sick, he stayed two days in the place where he was.
- American Standard Version (ASV)
- When therefore he heard that he was sick, he abode at that time two days in the place where he was.
- Bible in Basic English (BBE)
- So when the news came to him that Lazarus was ill, he did not go from the place where he was for two days.
- Darby Translation (DBY)
- When therefore he heard, He is sick, he remained two days then in the place where he was.
- Webster's Bible (WBS)
- When therefore he had heard that he was sick, he abode two days still in the same place where he was.
- Young's Literal Translation (YLT)
- when, therefore, he heard that he is ailing, then indeed he remained in the place in which he was two days,
Read in context
- 4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- 5ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
- 6ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
- 7ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
- 8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
Cross references
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Genesis 43:29–31 ಆದಿಕಾಂಡ 43:29–31ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು. ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Genesis 42:24 ಆದಿಕಾಂಡ 42:24ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
- Genesis 45:1–5 ಆದಿಕಾಂಡ 45:1–5ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ. ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು. ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು. ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Genesis 44:1–5 ಆದಿಕಾಂಡ 44:1–5ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು. ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು. ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು. ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ? ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.