John · chapter 12 · verse 10
John 12:10 in Kannada
ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
Aadare pradhaana yaajakaru laajaranannu saha kollabekendu aalochane maadikondaru.
John 12:10 in English
- King James Version (KJV)
- But the chief priests consulted that they might put Lazarus also to death;
- World English Bible (WEB)
- But the chief priests conspired to put Lazarus to death also,
- American Standard Version (ASV)
- But the chief priests took counsel that they might put Lazarus also to death;
- Bible in Basic English (BBE)
- Now there was talk among the chief priests of putting Lazarus to death;
- Darby Translation (DBY)
- But the chief priests took counsel that they might kill Lazarus also,
- Webster's Bible (WBS)
- But the chief priests consulted that they might put Lazarus also to death;
- Young's Literal Translation (YLT)
- and the chief priests took counsel, that also Lazarus they may kill,
Read in context
- 8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
- 9ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
- 10ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 11ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
- 12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
Cross references
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Genesis 4:4–10 ಆದಿಕಾಂಡ 4:4–10ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು. ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- John 11:57 ಯೋಹಾನನು 11:57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
- Job 40:8–9 ಯೋಬನು 40:8–9ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Daniel 5:21–23 ದಾನಿಯೇಲನು 5:21–23ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- Matthew 2:3–8 ಮತ್ತಾಯನು 2:3–8ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.