John · chapter 12 · verse 14
John 12:14 in Kannada
ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
Yesu praayada katteyannu kandukondu adara mele kootukondanu;
John 12:14 in English
- King James Version (KJV)
- And Jesus, when he had found a young ass, sat thereon; as it is written,
- World English Bible (WEB)
- Jesus, having found a young donkey, sat on it. As it is written,
- American Standard Version (ASV)
- And Jesus, having found a young ass, sat thereon; as it is written,
- Bible in Basic English (BBE)
- And Jesus saw a young ass and took his seat on it; as the Writings say,
- Darby Translation (DBY)
- And Jesus, having found a young ass, sat upon it; as it is written,
- Webster's Bible (WBS)
- And Jesus, when he had found a young ass, sat thereon; as it is written,
- Young's Literal Translation (YLT)
- and Jesus having found a young ass did sit upon it, according as it is written,
Read in context
- 12ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
- 13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- 14ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
- 15ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
- 16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
Cross references
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Matthew 21:1–7 ಮತ್ತಾಯನು 21:1–7ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು. ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
- Mark 11:1–7 ಮಾರ್ಕನು 11:1–7ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು. ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
- Luke 19:29–35 ಲೂಕನು 19:29–35ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ-- ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು. ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.