John · chapter 12 · verse 23
John 12:23 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
Yesu pratyuttaravaagi avarige--manushyakumaaranu mahime honduva galige bandade.
John 12:23 in English
- King James Version (KJV)
- And Jesus answered them, saying, The hour is come, that the Son of man should be glorified.
- World English Bible (WEB)
- Jesus answered them, “The time has come for the Son of Man to be glorified.
- American Standard Version (ASV)
- And Jesus answereth them, saying, The hour is come, that the Son of man should be glorified.
- Bible in Basic English (BBE)
- And Jesus said to them in answer, The hour of the glory of the Son of man has come.
- Darby Translation (DBY)
- But Jesus answered them saying, The hour is come that the Son of man should be glorified.
- Webster's Bible (WBS)
- And Jesus answered them, saying, The hour is come, that the Son of man should be glorified.
- Young's Literal Translation (YLT)
- And Jesus responded to them, saying, 'The hour hath come that the Son of Man may be glorified;
Read in context
- 21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
- 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- 23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- 24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
- 25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Cross references
- John 13:31–32 ಯೋಹಾನನು 13:31–32ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
- John 17:1–5 ಯೋಹಾನನು 17:1–5ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು. ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ. ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Mark 14:41 ಮಾರ್ಕನು 14:41ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Isaiah 49:5–6 ಯೆಶಾಯ 49:5–6ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 17:9–10 ಯೋಹಾನನು 17:9–10ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು. ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- John 12:16 ಯೋಹಾನನು 12:16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.