John · chapter 12 · verse 24
John 12:24 in Kannada
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
Naanu nimage nijanijavaagi helu ttene--godiya kaalu bhoomiyalli biddu saaya diddare adu onde aagi uliyuvadu; adu sattamele bahala phalakoduvadu.
John 12:24 in English
- King James Version (KJV)
- Verily, verily, I say unto you, Except a corn of wheat fall into the ground and die, it abideth alone: but if it die, it bringeth forth much fruit.
- World English Bible (WEB)
- Most certainly I tell you, unless a grain of wheat falls into the earth and dies, it remains by itself alone. But if it dies, it bears much fruit.
- American Standard Version (ASV)
- Verily, verily, I say unto you, Except a grain of wheat fall into the earth and die, it abideth by itself alone; but if it die, it beareth much fruit.
- Bible in Basic English (BBE)
- Truly I say to you, If a seed of grain does not go into the earth and come to an end, it is still a seed and no more; but through its death it gives much fruit.
- Darby Translation (DBY)
- Verily, verily, I say unto you, Except the grain of wheat falling into the ground die, it abides alone; but if it die, it bears much fruit.
- Webster's Bible (WBS)
- Verily, verily, I say to you, Except a corn of wheat fall into the ground and die, it abideth alone: but if it die, it bringeth forth much fruit.
- Young's Literal Translation (YLT)
- verily, verily, I say to you, if the grain of the wheat, having fallen to the earth, may not die, itself remaineth alone; and if it may die, it doth bear much fruit;
Read in context
- 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- 23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- 24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
- 25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- 26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
Cross references
- 1 Corinthians 15:36–38 1 ಕೊರಿಂಥದವರಿಗೆ 15:36–38ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ. ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ. ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
- Hebrews 2:9–10 ಇಬ್ರಿಯರಿಗೆ 2:9–10ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 12:32–33 ಯೋಹಾನನು 12:32–33ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
- Revelation 7:9–17 ಪ್ರಕಟನೆ 7:9–17ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Psalm 72:16 ಕೀರ್ತನೆಗಳು 72:16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
- Psalm 22:22–31 ಕೀರ್ತನೆಗಳು 22:22–31ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.