John · chapter 12 · verse 31
John 12:31 in Kannada
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
Eega ee lokakke nyaayateerpu aaguttade; ihalokada adhipatiyu eega horage haakalpaduvanu.
John 12:31 in English
- King James Version (KJV)
- Now is the judgment of this world: now shall the prince of this world be cast out.
- World English Bible (WEB)
- Now is the judgment of this world. Now the prince of this world will be cast out.
- American Standard Version (ASV)
- Now is the judgment of this world: now shall the prince of this world be cast out.
- Bible in Basic English (BBE)
- Now is this world to be judged: now will the ruler of this world be sent out.
- Darby Translation (DBY)
- Now is [the] judgment of this world; now shall the prince of this world be cast out:
- Webster's Bible (WBS)
- Now is the judgment of this world: now shall the prince of this world be cast out.
- Young's Literal Translation (YLT)
- now is a judgment of this world, now shall the ruler of this world be cast forth;
Read in context
- 29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- 30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
- 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
- 32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- 33ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
Cross references
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- 1 John 5:19 1 ಯೋಹಾನನು 5:19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Ephesians 6:12 ಎಫೆಸದವರಿಗೆ 6:12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- Revelation 20:2–3 ಪ್ರಕಟನೆ 20:2–3ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- John 16:8–11 ಯೋಹಾನನು 16:8–11ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Revelation 12:9–11 ಪ್ರಕಟನೆ 12:9–11ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Ephesians 2:1–2 ಎಫೆಸದವರಿಗೆ 2:1–2ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;