John · chapter 13 · verse 17
John 13:17 in Kannada
ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
Neevu ivu galannu tilukondu idarante maadidare neevu dhanyaru.
John 13:17 in English
- King James Version (KJV)
- If ye know these things, happy are ye if ye do them.
- World English Bible (WEB)
- If you know these things, blessed are you if you do them.
- American Standard Version (ASV)
- If ye know these things, blessed are ye if ye do them.
- Bible in Basic English (BBE)
- If these things are clear to you, happy are you if you do them.
- Darby Translation (DBY)
- If ye know these things, blessed are ye if ye do them.
- Webster's Bible (WBS)
- If ye know these things, happy are ye if ye do them.
- Young's Literal Translation (YLT)
- if these things ye have known, happy are ye, if ye may do them;
Read in context
- 15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
- 16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
- 17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- 18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- 19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
Cross references
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- James 4:17 ಯಾಕೋಬನು 4:17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Matthew 7:24–25 ಮತ್ತಾಯನು 7:24–25ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Psalm 19:11 ಕೀರ್ತನೆಗಳು 19:11ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Hebrews 11:7–8 ಇಬ್ರಿಯರಿಗೆ 11:7–8ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- James 2:20–24 ಯಾಕೋಬನು 2:20–24ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- Psalm 119:1–5 ಕೀರ್ತನೆಗಳು 119:1–5ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು. ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು. ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ. ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ. ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.