John · chapter 13 · verse 31
John 13:31 in Kannada
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
Avanu horage hodamele yesu-- eega manushyakumaaranu mahimepattiddaane. Devaru aatanalli mahimepattiddaane.
John 13:31 in English
- King James Version (KJV)
- Therefore, when he was gone out, Jesus said, Now is the Son of man glorified, and God is glorified in him.
- World English Bible (WEB)
- When he had gone out, Jesus said, “Now the Son of Man has been glorified, and God has been glorified in him.
- American Standard Version (ASV)
- When therefore he was gone out, Jesus saith, Now is the Son of man glorified, and God is glorified in him;
- Bible in Basic English (BBE)
- Then when he had gone out, Jesus said, Now is glory given to the Son of man, and God is given glory in him.
- Darby Translation (DBY)
- When therefore he was gone out Jesus says, Now is the Son of man glorified, and God is glorified in him.
- Webster's Bible (WBS)
- Therefore when he had gone out, Jesus said, Now is the Son of man glorified, and God is glorified in him.
- Young's Literal Translation (YLT)
- When, therefore, he went forth, Jesus saith, 'Now was the Son of Man glorified, and God was glorified in him;
Read in context
- 29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
- 30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- 31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
- 32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
- 33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
Cross references
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- John 16:14 ಯೋಹಾನನು 16:14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
- John 7:39 ಯೋಹಾನನು 7:39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- John 12:23 ಯೋಹಾನನು 12:23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- Ephesians 1:5–8 ಎಫೆಸದವರಿಗೆ 1:5–8ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Acts 2:36 ಅಪೊಸ್ತಲರ ಕೃತ್ಯಗಳು 2:36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- Hebrews 5:5–9 ಇಬ್ರಿಯರಿಗೆ 5:5–9ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Romans 15:6–9 ರೋಮಾಪುರದವರಿಗೆ 15:6–9ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ. ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ. ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.