John · chapter 13 · verse 33
John 13:33 in Kannada
ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
Chikkamakkale, innu svalpa kaalave naanu nimma sangada iruttene, neevu nannannu hudukuviri; naanu hoguvallige neevu baralaarirendu naanu yehoodyarige helidanteye nimagoo eega heluttene.
John 13:33 in English
- King James Version (KJV)
- Little children, yet a little while I am with you. Ye shall seek me: and as I said unto the Jews, Whither I go, ye cannot come; so now I say to you.
- World English Bible (WEB)
- Little children, I will be with you a little while longer. You will seek me, and as I said to the Jews, ‘Where I am going, you can’t come,’ so now I tell you.
- American Standard Version (ASV)
- Little children, yet a little while I am with you. Ye shall seek me: and as I said unto the Jews, Whither I go, ye cannot come; so now I say unto you.
- Bible in Basic English (BBE)
- My dear children, I am only to be with you a little longer. Then you will be looking for me: and as I said to the Jews, so now I say to you, Where I am going you may not come.
- Darby Translation (DBY)
- Children, yet a little while I am with you. Ye shall seek me; and, as I said to the Jews, Where I go ye cannot come, I say to you also now.
- Webster's Bible (WBS)
- Little children, yet a little while I am with you. Ye will seek me: and, as I said to the Jews, Whither I go, ye cannot come; so now I say to you.
- Young's Literal Translation (YLT)
- 'Little children, yet a little am I with you; ye will seek me, and, according as I said to the Jews — Whither I go away, ye are not able to come, to you also I do say [it] now.
Read in context
- 31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
- 32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
- 33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
- 34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- 35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
Cross references
- John 7:33–34 ಯೋಹಾನನು 7:33–34ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ. ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
- John 8:21–24 ಯೋಹಾನನು 8:21–24ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು. ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು. ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- John 16:16–22 ಯೋಹಾನನು 16:16–22ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು. ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು. ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ? ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- John 14:4–6 ಯೋಹಾನನು 14:4–6ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು. ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು. ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 1 John 5:21 1 ಯೋಹಾನನು 5:21ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.