John · chapter 13 · verse 7
John 13:7 in Kannada
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
Yesu pratyuttaravaagi avanige--naanu maaduvadu enendu eega ninage tiliyuvadilla; aadare innu mele ninage tiliyuvadu andanu.
John 13:7 in English
- King James Version (KJV)
- Jesus answered and said unto him, What I do thou knowest not now; but thou shalt know hereafter.
- World English Bible (WEB)
- Jesus answered him, “You don’t know what I am doing now, but you will understand later.”
- American Standard Version (ASV)
- Jesus answered and said unto him, What I do thou knowest not now; but thou shalt understand hereafter.
- Bible in Basic English (BBE)
- And Jesus, answering, said to him, What I do is not clear to you now, but it will be clear to you in time to come.
- Darby Translation (DBY)
- Jesus answered and said to him, What I do thou dost not know now, but thou shalt know hereafter.
- Webster's Bible (WBS)
- Jesus answered and said to him, What I do thou knowest not now; but thou shalt know hereafter.
- Young's Literal Translation (YLT)
- Jesus answered and said to him, 'That which I do thou hast not known now, but thou shalt know after these things;'
Read in context
- 5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
- 6ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
- 7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
- 8ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
- 9ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
Cross references
- Daniel 12:8 ದಾನಿಯೇಲನು 12:8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- John 12:16 ಯೋಹಾನನು 12:16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- John 13:10–12 ಯೋಹಾನನು 13:10–12ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು. ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು. ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
- John 13:36 ಯೋಹಾನನು 13:36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
- Daniel 12:12 ದಾನಿಯೇಲನು 12:12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- Habakkuk 2:1–3 ಹಬಕ್ಕೂಕ 2:1–3ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು. ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Jeremiah 32:24–25 ಯೆರೆಮೀಯ 32:24–25ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ. ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
- Jeremiah 32:43 ಯೆರೆಮೀಯ 32:43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.