John · chapter 14 · verse 11
John 14:11 in Kannada
ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
Naanu tande yalliddenentaloo tandeyu nannalliddaanentaloo nannannu nambiri. Illadiddare aa kriyegala nimittavaadaroo nannannu nambiri.
John 14:11 in English
- King James Version (KJV)
- Believe me that I [am] in the Father, and the Father in me: or else believe me for the very works’ sake.
- World English Bible (WEB)
- Believe me that I am in the Father, and the Father in me; or else believe me for the very works’ sake.
- American Standard Version (ASV)
- Believe me that I am in the Father, and the Father in me: or else believe me for the very works’ sake.
- Bible in Basic English (BBE)
- Have faith that I am in the Father and that the Father is in me: at least, have faith in me because of what I do.
- Darby Translation (DBY)
- Believe me that I [am] in the Father and the Father in me; but if not, believe me for the works' sake themselves.
- Webster's Bible (WBS)
- Believe me that I [am] in the Father, and the Father in me: or else believe me for the very works' sake.
- Young's Literal Translation (YLT)
- believe me, that I [am] in the Father, and the Father in me; and if not, because of the works themselves, believe me.
Read in context
- 9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- 11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
- 12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- 13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
Cross references
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- John 10:25 ಯೋಹಾನನು 10:25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
- John 5:36 ಯೋಹಾನನು 5:36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Matthew 11:4–5 ಮತ್ತಾಯನು 11:4–5ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- John 12:38–40 ಯೋಹಾನನು 12:38–40ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Luke 7:21–23 ಲೂಕನು 7:21–23ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.