John · chapter 14 · verse 15
John 14:15 in Kannada
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
Neevu nannannu preetisuvadaadare nanna aajnye galannu kaikolliri.
John 14:15 in English
- King James Version (KJV)
- If ye love me, keep my commandments.
- World English Bible (WEB)
- If you love me, keep my commandments.
- American Standard Version (ASV)
- If ye love me, ye will keep my commandments.
- Bible in Basic English (BBE)
- If you have love for me, you will keep my laws.
- Darby Translation (DBY)
- If ye love me, keep my commandments.
- Webster's Bible (WBS)
- If ye love me, keep my commandments.
- Young's Literal Translation (YLT)
- 'If ye love me, my commands keep,
Read in context
- 13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- 14ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
- 15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- 17ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
Cross references
- 1 John 2:3–5 1 ಯೋಹಾನನು 2:3–5ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ. ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 1 John 5:2–3 1 ಯೋಹಾನನು 5:2–3ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 2 John 1:6 2 ಯೋಹಾನನು 1:6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- John 15:10–14 ಯೋಹಾನನು 15:10–14ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ. ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ. ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- 1 John 4:19–20 1 ಯೋಹಾನನು 4:19–20ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- John 8:42 ಯೋಹಾನನು 8:42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.