John · chapter 14 · verse 19
John 14:19 in Kannada
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
Innu svalpa kaalavaada mele lokavu nannannu noduvadilla. Aadare neevu nannannu noduviri; naanu jeevisuva darinda neevu saha jeevisuviri.
John 14:19 in English
- King James Version (KJV)
- Yet a little while, and the world seeth me no more; but ye see me: because I live, ye shall live also.
- World English Bible (WEB)
- Yet a little while, and the world will see me no more; but you will see me. Because I live, you will live also.
- American Standard Version (ASV)
- Yet a little while, and the world beholdeth me no more; but ye behold me: because I live, ye shall live also.
- Bible in Basic English (BBE)
- A little time longer, and the world will see me no more; but you will see me; and you will be living because I am living.
- Darby Translation (DBY)
- Yet a little and the world sees me no longer; but ye see me; because I live ye also shall live.
- Webster's Bible (WBS)
- Yet a little while, and the world seeth me no more; but ye see me: because I live, ye shall live also.
- Young's Literal Translation (YLT)
- yet a little, and the world doth no more behold me, and ye behold me, because I live, and ye shall live;
Read in context
- 17ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- 18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
- 19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
Cross references
- John 16:16 ಯೋಹಾನನು 16:16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- John 7:33 ಯೋಹಾನನು 7:33ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
- John 6:56–58 ಯೋಹಾನನು 6:56–58ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- John 11:25 ಯೋಹಾನನು 11:25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- 2 Corinthians 4:10–12 2 ಕೊರಿಂಥದವರಿಗೆ 4:10–12ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.