John · chapter 14 · verse 21
John 14:21 in Kannada
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
Nanna aajnyegalannu hondi avugalannu anusarisuvavane nannannu preetisuvavanu; nannannu preetisuvavanannu nanna tandeyoo preetisuvanu. Naanu avanannu preetisi avanige nannannu vyaktapadisi kolluvenu endu helidanu.
John 14:21 in English
- King James Version (KJV)
- He that hath my commandments, and keepeth them, he it is that loveth me: and he that loveth me shall be loved of my Father, and I will love him, and will manifest myself to him.
- World English Bible (WEB)
- One who has my commandments and keeps them, that person is one who loves me. One who loves me will be loved by my Father, and I will love him, and will reveal myself to him.”
- American Standard Version (ASV)
- He that hath my commandments, and keepeth them, he it is that loveth me: and he that loveth me shall be loved of my Father, and I will love him, and will manifest myself unto him.
- Bible in Basic English (BBE)
- He who has my laws and keeps them, he it is who has love for me: and he who has love for me will be loved by my Father, and I will have love for him and will let myself be seen clearly by him.
- Darby Translation (DBY)
- He that has my commandments and keeps them, he it is that loves me; but he that loves me shall be loved by my Father, and I will love him and will manifest myself to him.
- Webster's Bible (WBS)
- He that hath my commandments, and keepeth them, he it is that loveth me: and he that loveth me, shall be loved by my Father, and I will love him, and will manifest myself to him.
- Young's Literal Translation (YLT)
- he who is having my commands, and is keeping them, that one it is who is loving me, and he who is loving me shall be loved by my Father, and I will love him, and will manifest myself to him.'
Read in context
- 19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- 22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
- 23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
Cross references
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 2 John 1:6 2 ಯೋಹಾನನು 1:6ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
- John 15:9–10 ಯೋಹಾನನು 15:9–10ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- John 16:27 ಯೋಹಾನನು 16:27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 1 John 3:18–24 1 ಯೋಹಾನನು 3:18–24ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- John 14:22–24 ಯೋಹಾನನು 14:22–24ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?