John · chapter 15 · verse 1
John 15:1 in Kannada
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
Naane nijavaada draakshe balli nanna tande vyavasaayagaaranu.
John 15:1 in English
- King James Version (KJV)
- I am the true vine, and my Father is the husbandman.
- World English Bible (WEB)
- “I am the true vine, and my Father is the farmer.
- American Standard Version (ASV)
- I am the true vine, and my Father is the husbandman.
- Bible in Basic English (BBE)
- I am the true vine and my Father is the gardener.
- Darby Translation (DBY)
- I am the true vine, and my Father is the husbandman.
- Webster's Bible (WBS)
- I am the true vine, and my Father is the husbandman.
- Young's Literal Translation (YLT)
- 'I am the true vine, and my Father is the husbandman;
Read in context
- 1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- 2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- 3ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
Cross references
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Isaiah 27:2–3 ಯೆಶಾಯ 27:2–3ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Psalm 80:8–19 ಕೀರ್ತನೆಗಳು 80:8–19ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು. ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ. ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು. ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ. ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ. ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು. ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- John 6:55 ಯೋಹಾನನು 6:55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- Isaiah 5:1–7 ಯೆಶಾಯ 5:1–7ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Jeremiah 12:10 ಯೆರೆಮೀಯ 12:10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
- 1 John 2:8 1 ಯೋಹಾನನು 2:8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- Mark 12:1 ಮಾರ್ಕನು 12:1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
- Hosea 10:1 ಹೋಶೇಯ 10:1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.