John · chapter 15 · verse 10
John 15:10 in Kannada
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
Naanu nanna tandeya aajnyegalannu kaikondu aatana preetiyalli neleyaagiru vanteye neevu nanna aajnyegalannu kaikondare nanna preetiyalli neleyaagiruviri.
John 15:10 in English
- King James Version (KJV)
- If ye keep my commandments, ye shall abide in my love; even as I have kept my Father’s commandments, and abide in his love.
- World English Bible (WEB)
- If you keep my commandments, you will remain in my love, even as I have kept my Father’s commandments and remain in his love.
- American Standard Version (ASV)
- If ye keep my commandments, ye shall abide in my love; even as I have kept my Father’s commandments, and abide in his love.
- Bible in Basic English (BBE)
- If you keep my laws, you will be ever in my love, even as I have kept my Father's laws, and am ever in his love.
- Darby Translation (DBY)
- If ye shall keep my commandments, ye shall abide in my love, as I have kept my Father's commandments and abide in his love.
- Webster's Bible (WBS)
- If ye keep my commandments, ye shall abide in my love; even as I have kept my Father's commandments, and abide in his love.
- Young's Literal Translation (YLT)
- if my commandments ye may keep, ye shall remain in my love, according as I the commands of my Father have kept, and do remain in His love;
Read in context
- 8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- 9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
- 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- 11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- 12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
Cross references
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 John 3:21–24 1 ಯೋಹಾನನು 3:21–24ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- 1 John 2:5 1 ಯೋಹಾನನು 2:5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
- 2 Peter 2:21 2 ಪೇತ್ರನು 2:21ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- John 8:29 ಯೋಹಾನನು 8:29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- Matthew 3:15–17 ಮತ್ತಾಯನು 3:15–17ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು. ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು. ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.