John · chapter 15 · verse 16
John 15:16 in Kannada
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
Neevu nannannu aarisikondilla; aadare naanu nimmannu aarisi kondu, neevu hogi phalakoduvanteyoo nimma phalavu nelegondiruvanteyoo nimmannu nemisiddene. Aadakaarana neevu nanna hesarinalli tandeyannu enu kelikondaroo aatanu adannu nimage koduvanu.
John 15:16 in English
- King James Version (KJV)
- Ye have not chosen me, but I have chosen you, and ordained you, that ye should go and bring forth fruit, and [that] your fruit should remain: that whatsoever ye shall ask of the Father in my name, he may give it you.
- World English Bible (WEB)
- You didn’t choose me, but I chose you and appointed you, that you should go and bear fruit, and that your fruit should remain; that whatever you will ask of the Father in my name, he may give it to you.
- American Standard Version (ASV)
- Ye did not choose me, but I chose you, and appointed you, that ye should go and bear fruit, and [that] your fruit should abide: that whatsoever ye shall ask of the Father in my name, he may give it you.
- Bible in Basic English (BBE)
- You did not take me for yourselves, but I took you for myself; and I gave you the work of going about and producing fruit which will be for ever; so that whatever request you make to the Father in my name he may give it to you.
- Darby Translation (DBY)
- Ye have not chosen me, but I have chosen you, and have set you that ye should go and [that] ye should bear fruit, and [that] your fruit should abide, that whatsoever ye shall ask the Father in my name he may give you.
- Webster's Bible (WBS)
- Ye have not chosen me, but I have chosen you, and ordained you, that ye should go and bring forth fruit, and [that] your fruit should remain: that whatever ye shall ask of the Father in my name, he may give it you.
- Young's Literal Translation (YLT)
- 'Ye did not choose out me, but I chose out you, and did appoint you, that ye might go away, and might bear fruit, and your fruit might remain, that whatever ye may ask of the Father in my name, He may give you.
Read in context
- 14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- 17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
- 18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
Cross references
- Jeremiah 1:5–7 ಯೆರೆಮೀಯ 1:5–7ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು. ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- John 15:19 ಯೋಹಾನನು 15:19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Luke 6:13 ಲೂಕನು 6:13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- Acts 22:14 ಅಪೊಸ್ತಲರ ಕೃತ್ಯಗಳು 22:14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- 1 Peter 1:14–21 1 ಪೇತ್ರನು 1:14–21ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ. ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ. ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;