John · chapter 15 · verse 19
John 15:19 in Kannada
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
Neevu lokadavaraagiddare lokavu tannavarannu preetisuttittu; aadare neevu lokadavarallade iruvadarindaloo naanu lokadolaginda nimmannu aarisikondaddarindaloo lokavu nimmannu dveshamaaduttade.
John 15:19 in English
- King James Version (KJV)
- If ye were of the world, the world would love his own: but because ye are not of the world, but I have chosen you out of the world, therefore the world hateth you.
- World English Bible (WEB)
- If you were of the world, the world would love its own. But because you are not of the world, since I chose you out of the world, therefore the world hates you.
- American Standard Version (ASV)
- If ye were of the world, the world would love its own: but because ye are not of the world, but I chose you out of the world, therefore the world hateth you.
- Bible in Basic English (BBE)
- If you were of the world, you would be loved by the world: but because you are not of the world, but I have taken you out of the world, you are hated by the world.
- Darby Translation (DBY)
- If ye were of the world, the world would love its own; but because ye are not of the world, but I have chosen you out of the world, on account of this the world hates you.
- Webster's Bible (WBS)
- If ye were of the world, the world would love its own: but because ye are not of the world, but I have chosen you out of the world, therefore the world hateth you.
- Young's Literal Translation (YLT)
- if of the world ye were, the world its own would have been loving, and because of the world ye are not — but I chose out of the world — because of this the world hateth you.
Read in context
- 17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
- 18ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
- 19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- 20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- 21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
Cross references
- 1 John 4:4–5 1 ಯೋಹಾನನು 4:4–5ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ. ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- John 17:14–16 ಯೋಹಾನನು 17:14–16ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ. ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ. ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
- Ephesians 1:4–11 ಎಫೆಸದವರಿಗೆ 1:4–11ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ. ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- 1 John 5:19–20 1 ಯೋಹಾನನು 5:19–20ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Ephesians 2:2–5 ಎಫೆಸದವರಿಗೆ 2:2–5ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- 1 Peter 2:9–12 1 ಪೇತ್ರನು 2:9–12ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Luke 6:32 ಲೂಕನು 6:32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Revelation 20:7–9 ಪ್ರಕಟನೆ 20:7–9ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.