John · chapter 15 · verse 2
John 15:2 in Kannada
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
Nannalli phalaphalisada pratiyondu kombeyannu aatanu tegeduhaakuttaane; phalakoduva pratiyondu kombeyu hechchaagi phalakoduva haage adannu shuddhi maaduttaane.
John 15:2 in English
- King James Version (KJV)
- Every branch in me that beareth not fruit he taketh away: and every [branch] that beareth fruit, he purgeth it, that it may bring forth more fruit.
- World English Bible (WEB)
- Every branch in me that doesn’t bear fruit, he takes away. Every branch that bears fruit, he prunes, that it may bear more fruit.
- American Standard Version (ASV)
- Every branch in me that beareth not fruit, he taketh it away: and every [branch] that beareth fruit, he cleanseth it, that it may bear more fruit.
- Bible in Basic English (BBE)
- He takes away every branch in me which has no fruit, and every branch which has fruit he makes clean, so that it may have more fruit.
- Darby Translation (DBY)
- [As to] every branch in me not bearing fruit, he takes it away; and [as to] every one bearing fruit, he purges it that it may bring forth more fruit.
- Webster's Bible (WBS)
- Every branch in me that beareth not fruit, he taketh away; and every [branch] that beareth fruit, he cleaneth it, that it my bring forth more fruit.
- Young's Literal Translation (YLT)
- every branch in me not bearing fruit, He doth take it away, and every one bearing fruit, He doth cleanse by pruning it, that it may bear more fruit;
Read in context
- 1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- 2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- 3ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
- 4ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Cross references
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Hebrews 12:10–11 ಇಬ್ರಿಯರಿಗೆ 12:10–11ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- John 15:8 ಯೋಹಾನನು 15:8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Luke 13:7–9 ಲೂಕನು 13:7–9ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು. ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು; ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- Hebrews 6:7–8 ಇಬ್ರಿಯರಿಗೆ 6:7–8ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Matthew 13:12 ಮತ್ತಾಯನು 13:12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 1 Thessalonians 5:23–24 1 ಥೆಸಲೊನೀಕದವರಿಗೆ 5:23–24ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Philippians 1:9–11 ಫಿಲಿಪ್ಪಿಯವರಿಗೆ 1:9–11ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.