John · chapter 16 · verse 1
John 16:1 in Kannada
ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
Neevu abhyantarapadabaaradendu ee maatugalannu naanu nimage heliddene.
John 16:1 in English
- King James Version (KJV)
- These things have I spoken unto you, that ye should not be offended.
- World English Bible (WEB)
- “I have said these things to you so that you wouldn’t be caused to stumble.
- American Standard Version (ASV)
- These things have I spoken unto you, that ye should not be caused to stumble.
- Bible in Basic English (BBE)
- I have said these things to you so that you may not be in doubt.
- Darby Translation (DBY)
- These things I have spoken unto you that ye may not be offended.
- Webster's Bible (WBS)
- These things have I spoken to you, that ye should not be offended.
- Young's Literal Translation (YLT)
- 'These things I have spoken to you, that ye may not be stumbled,
Read in context
- 1ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
- 2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- 3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
Cross references
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Matthew 13:21 ಮತ್ತಾಯನು 13:21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- Matthew 26:31–33 ಮತ್ತಾಯನು 26:31–33ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ; ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು. ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
- John 15:18–27 ಯೋಹಾನನು 15:18–27ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ. ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- Romans 14:21 ರೋಮಾಪುರದವರಿಗೆ 14:21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- Matthew 13:57 ಮತ್ತಾಯನು 13:57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- Philippians 1:10 ಫಿಲಿಪ್ಪಿಯವರಿಗೆ 1:10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ