John · chapter 16 · verse 23
John 16:23 in Kannada
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
Aa dinadalli neevu nannannu enoo keluvadilla. Naanu nimage nijanijavaagi heluttene--neevu nanna hesarinalli tandeyannu enu kelikondaroo adannu aatanu nimage koduvanu.
John 16:23 in English
- King James Version (KJV)
- And in that day ye shall ask me nothing. Verily, verily, I say unto you, Whatsoever ye shall ask the Father in my name, he will give [it] you.
- World English Bible (WEB)
- “In that day you will ask me no questions. Most certainly I tell you, whatever you may ask of the Father in my name, he will give it to you.
- American Standard Version (ASV)
- And in that day ye shall ask me no question. Verily, verily, I say unto you, If ye shall ask anything of the Father, he will give it you in my name.
- Bible in Basic English (BBE)
- And on that day you will put no questions to me. Truly I say to you, Whatever request you make to the Father, he will give it to you in my name.
- Darby Translation (DBY)
- And in that day ye shall demand nothing of me: verily, verily, I say to you, Whatsoever ye shall ask the Father in my name, he will give you.
- Webster's Bible (WBS)
- And in that day ye will ask me nothing: Verily, verily, I say to you, Whatever ye shall ask the Father in my name, he will give [it] you.
- Young's Literal Translation (YLT)
- and in that day ye will question me nothing; verily, verily, I say to you, as many things as ye may ask of the Father in my name, He will give you;
Read in context
- 21ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
- 22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- 25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
Cross references
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- John 14:13–14 ಯೋಹಾನನು 14:13–14ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 1 John 5:14–16 1 ಯೋಹಾನನು 5:14–16ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ. ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- John 16:26 ಯೋಹಾನನು 16:26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
- John 14:20 ಯೋಹಾನನು 14:20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- John 15:15–16 ಯೋಹಾನನು 15:15–16ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ. ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Hebrews 10:19–23 ಇಬ್ರಿಯರಿಗೆ 10:19–23ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ. ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.