John · chapter 16 · verse 7
John 16:7 in Kannada
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
Aadaroo naanu nimage satyavannu heluttene; naanu hoguvadu nimage hitakaravaagide; yaakandare naanu hogadiddare aadarikanu nimma balige baruvadilla; naanu hodare aatanannu nimma balige kaluhisuvenu.
John 16:7 in English
- King James Version (KJV)
- Nevertheless I tell you the truth; It is expedient for you that I go away: for if I go not away, the Comforter will not come unto you; but if I depart, I will send him unto you.
- World English Bible (WEB)
- Nevertheless I tell you the truth: It is to your advantage that I go away; for if I don’t go away, the Counselor won’t come to you. But if I go, I will send him to you.
- American Standard Version (ASV)
- Nevertheless I tell you the truth: It is expedient for you that I go away; for if I go not away, the Comforter will not come unto you; but if I go, I will send him unto you.
- Bible in Basic English (BBE)
- But what I am saying is true: my going is for your good: for if I do not go away, the Helper will not come to you; but if I go, I will send him to you.
- Darby Translation (DBY)
- But I say the truth to you, It is profitable for you that I go away; for if I do not go away, the Comforter will not come to you; but if I go I will send him to you.
- Webster's Bible (WBS)
- Nevertheless, I tell you the truth: It is expedient for you that I depart; for if I go not away, the Comforter will not come to you; but if I depart, I will send him to you.
- Young's Literal Translation (YLT)
- 'But I tell you the truth; it is better for you that I go away, for if I may not go away, the Comforter will not come unto you, and if I go on, I will send Him unto you;
Read in context
- 5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
- 6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
- 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- 8ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
- 9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
Cross references
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Acts 1:4–5 ಅಪೊಸ್ತಲರ ಕೃತ್ಯಗಳು 1:4–5ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು. ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- Luke 24:49 ಲೂಕನು 24:49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- John 7:39 ಯೋಹಾನನು 7:39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Ephesians 4:8–13 ಎಫೆಸದವರಿಗೆ 4:8–13ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.