John · chapter 17 · verse 15
John 17:15 in Kannada
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
Neenu avarannu lokadolaginda tegeyabekentalla; avarannu kedininda kaapaadabekendu naanu kelikollu ttene.
John 17:15 in English
- King James Version (KJV)
- I pray not that thou shouldest take them out of the world, but that thou shouldest keep them from the evil.
- World English Bible (WEB)
- I pray not that you would take them from the world, but that you would keep them from the evil one.
- American Standard Version (ASV)
- I pray not that thou shouldest take them from the world, but that thou shouldest keep them from the evil [one].
- Bible in Basic English (BBE)
- My prayer is not that you will take them out of the world, but that you will keep them from the Evil One.
- Darby Translation (DBY)
- I do not demand that thou shouldest take them out of the world, but that thou shouldest keep them out of evil.
- Webster's Bible (WBS)
- I pray not that thou shouldst take them out of the world, but that thou shouldst keep them from the evil.
- Young's Literal Translation (YLT)
- I do not ask that Thou mayest take them out of the world, but that Thou mayest keep them out of the evil.
Read in context
- 13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
- 14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.
- 15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
- 16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
- 17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
Cross references
- Psalm 121:7 ಕೀರ್ತನೆಗಳು 121:7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Galatians 1:4 ಗಲಾತ್ಯದವರಿಗೆ 1:4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Luke 11:4 ಲೂಕನು 11:4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
- Isaiah 38:18–19 ಯೆಶಾಯ 38:18–19ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Philippians 1:20–26 ಫಿಲಿಪ್ಪಿಯವರಿಗೆ 1:20–26ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು. ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Luke 8:38–39 ಲೂಕನು 8:38–39ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.