John · chapter 17 · verse 19
John 17:19 in Kannada
ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
Avaru satyadalli pratishthisalpaduvante naanu nannannu avari goskara pratishthisikolluttene.
John 17:19 in English
- King James Version (KJV)
- And for their sakes I sanctify myself, that they also might be sanctified through the truth.
- World English Bible (WEB)
- For their sakes I sanctify myself, that they themselves also may be sanctified in truth.
- American Standard Version (ASV)
- And for their sakes I sanctify myself, that they themselves also may be sanctified in truth.
- Bible in Basic English (BBE)
- And for them I make myself holy, so that they may be made truly holy.
- Darby Translation (DBY)
- and I sanctify myself for them, that they also may be sanctified by truth.
- Webster's Bible (WBS)
- And for their sakes I sanctify myself, that they also may be sanctified through the truth.
- Young's Literal Translation (YLT)
- and for them do I sanctify myself, that they also themselves may be sanctified in truth.
Read in context
- 17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
- 18ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
- 19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- 20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
- 21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
Cross references
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Hebrews 2:11 ಇಬ್ರಿಯರಿಗೆ 2:11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- John 17:17 ಯೋಹಾನನು 17:17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
- Hebrews 10:5–10 ಇಬ್ರಿಯರಿಗೆ 10:5–10ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 2 Corinthians 4:15 2 ಕೊರಿಂಥದವರಿಗೆ 4:15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.