John · chapter 17 · verse 2
John 17:2 in Kannada
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
Neenu aatanige yaaraarannu kottiddeeyo avarige aatanu nityajeevavannu kodabekendu aatanige ellaa manushyara mele adhikaaravannu kottiddee.
John 17:2 in English
- King James Version (KJV)
- As thou hast given him power over all flesh, that he should give eternal life to as many as thou hast given him.
- World English Bible (WEB)
- even as you gave him authority over all flesh, so he will give eternal life to all whom you have given him.
- American Standard Version (ASV)
- even as thou gavest him authority over all flesh, that to all whom thou hast given him, he should give eternal life.
- Bible in Basic English (BBE)
- Even as you gave him authority over all flesh, to give eternal life to all those whom you have given to him.
- Darby Translation (DBY)
- as thou hast given him authority over all flesh, that [as to] all that thou hast given to him, he should give them life eternal.
- Webster's Bible (WBS)
- As thou hast given him power over all flesh, that he should give eternal life to as many as thou hast given him.
- Young's Literal Translation (YLT)
- according as Thou didst give to him authority over all flesh, that — all that Thou hast given to him — he may give to them life age-during;
Read in context
- 1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- 2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- 3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
Cross references
- John 10:28–29 ಯೋಹಾನನು 10:28–29ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- John 6:39 ಯೋಹಾನನು 6:39ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Hebrews 2:8–9 ಇಬ್ರಿಯರಿಗೆ 2:8–9ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- John 17:9 ಯೋಹಾನನು 17:9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Psalm 2:6–12 ಕೀರ್ತನೆಗಳು 2:6–12ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- John 17:6 ಯೋಹಾನನು 17:6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.