John · chapter 17 · verse 3
John 17:3 in Kannada
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
Obbane satyadevaraagiruva ninnannoo neenu kaluhisikotta yesu kristanannoo avaru aritu kolluvade nityajeeva.
John 17:3 in English
- King James Version (KJV)
- And this is life eternal, that they might know thee the only true God, and Jesus Christ, whom thou hast sent.
- World English Bible (WEB)
- This is eternal life, that they should know you, the only true God, and him whom you sent, Jesus Christ.
- American Standard Version (ASV)
- And this is life eternal, that they should know thee the only true God, and him whom thou didst send, [even] Jesus Christ.
- Bible in Basic English (BBE)
- And this is eternal life: to have knowledge of you, the only true God, and of him whom you have sent, even Jesus Christ.
- Darby Translation (DBY)
- And this is the eternal life, that they should know thee, the only true God, and Jesus Christ whom thou hast sent.
- Webster's Bible (WBS)
- And this is life eternal, that they may know thee the only true God, and Jesus Christ whom thou hast sent.
- Young's Literal Translation (YLT)
- and this is the life age-during, that they may know Thee, the only true God, and him whom Thou didst send — Jesus Christ;
Read in context
- 1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- 2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- 3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- 5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
Cross references
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- John 17:25 ಯೋಹಾನನು 17:25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- John 14:9–10 ಯೋಹಾನನು 14:9–10ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ? ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- Hebrews 8:11–12 ಇಬ್ರಿಯರಿಗೆ 8:11–12ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.