John · chapter 17 · verse 6
John 17:6 in Kannada
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
Lokadolaginda neenu nanage kotta manu shyarige naanu ninna hesarannu pratyakshapadisiddene. Avaru ninnavaraagiddaru; neenu avarannu nanage kottiddee; idallade avaru ninna vaakyavannu kai kondiddaare.
John 17:6 in English
- King James Version (KJV)
- I have manifested thy name unto the men which thou gavest me out of the world: thine they were, and thou gavest them me; and they have kept thy word.
- World English Bible (WEB)
- “I revealed your name to the people whom you have given me out of the world. They were yours, and you have given them to me. They have kept your word.
- American Standard Version (ASV)
- I manifested thy name unto the men whom thou gavest me out of the world: thine they were, and thou gavest them to me; and they have kept thy word.
- Bible in Basic English (BBE)
- I have given knowledge of your name to the men whom you gave me out of the world: yours they were, and you gave them to me, and they have kept your words.
- Darby Translation (DBY)
- I have manifested thy name to the men whom thou gavest me out of the world. They were thine, and thou gavest them me, and they have kept thy word.
- Webster's Bible (WBS)
- I have manifested thy name to the men whom thou gavest to me out of the world: thine they were, and thou gavest them to me; and they have kept thy word.
- Young's Literal Translation (YLT)
- I did manifest Thy name to the men whom Thou hast given to me out of the world; Thine they were, and to me Thou hast given them, and Thy word they have kept;
Read in context
- 4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- 5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- 6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- 7ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
- 8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
Cross references
- John 17:26 ಯೋಹಾನನು 17:26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 10:27–29 ಯೋಹಾನನು 10:27–29ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Exodus 3:13–15 ವಿಮೋಚನಕಾಂಡ 3:13–15ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು. ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- John 15:19 ಯೋಹಾನನು 15:19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Ephesians 1:4–11 ಎಫೆಸದವರಿಗೆ 1:4–11ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ. ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು. ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.