John · chapter 18 · verse 20
John 18:20 in Kannada
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
Yesu pratyuttaravaagi avanige--naanu bahirangavaagi lokada munde maatanaadiddene; yehoodyaru yaavaagaloo kooduvantha sabhaamandiradalliyoo devaalayadalliyoo naanu upadeshisiddenu; guptavaagi yaavadannoo naanu helalilla.
John 18:20 in English
- King James Version (KJV)
- Jesus answered him, I spake openly to the world; I ever taught in the synagogue, and in the temple, whither the Jews always resort; and in secret have I said nothing.
- World English Bible (WEB)
- Jesus answered him, “I spoke openly to the world. I always taught in synagogues and in the temple, where the Jews always meet. I said nothing in secret.
- American Standard Version (ASV)
- Jesus answered him, I have spoken openly to the world; I ever taught in synagogues, and in the temple, where all the Jews come together; and in secret spake I nothing.
- Bible in Basic English (BBE)
- Jesus made answer, I said things openly to the world at all times; I have given my teaching in the Synagogues and in the Temple to which all the Jews come; and I have said nothing secretly.
- Darby Translation (DBY)
- Jesus answered him, I spoke openly to the world; I taught always in [the] synagogue and in the temple, where all the Jews come together, and in secret I have spoken nothing.
- Webster's Bible (WBS)
- Jesus answered him, I spoke openly to the world; I ever taught in the synagogue and in the temple, whither the Jews always resort; and in secret have I said nothing.
- Young's Literal Translation (YLT)
- Jesus answered him, 'I spake freely to the world, I did always teach in a synagogue, and in the temple, where the Jews do always come together; and in secret I spake nothing;
Read in context
- 18ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
- 19ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
- 20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
- 22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
Cross references
- John 7:26 ಯೋಹಾನನು 7:26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- Isaiah 48:16 ಯೆಶಾಯ 48:16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- John 7:4 ಯೋಹಾನನು 7:4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Luke 4:15 ಲೂಕನು 4:15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- Matthew 26:65 ಮತ್ತಾಯನು 26:65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- John 7:14 ಯೋಹಾನನು 7:14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- John 10:23–39 ಯೋಹಾನನು 10:23–39ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು; ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು. ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ. ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು. ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು