John · chapter 18 · verse 3
John 18:3 in Kannada
ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
Aaga yoodanu pradhaanayaajakarinda mattu pharisaaya rinda janara gumpannoo adhikaarigalannoo padedu kondu deepagalindaloo panjugalindaloo aayudhagalindaloo allige bandanu.
John 18:3 in English
- King James Version (KJV)
- Judas then, having received a band [of men] and officers from the chief priests and Pharisees, cometh thither with lanterns and torches and weapons.
- World English Bible (WEB)
- Judas then, having taken a detachment of soldiers and officers from the chief priests and the Pharisees, came there with lanterns, torches, and weapons.
- American Standard Version (ASV)
- Judas then, having received the band [of soldiers], and officers from the chief priests and the Pharisees, cometh thither with lanterns and torches and weapons.
- Bible in Basic English (BBE)
- So Judas, getting a band of armed men and police from the chief priests and Pharisees, went there with lights and with arms.
- Darby Translation (DBY)
- Judas therefore, having got the band, and officers of the chief priests and Pharisees, comes there with lanterns and torches and weapons.
- Webster's Bible (WBS)
- Judas then, having received a band [of men] and officers from the chief priests and Pharisees, cometh thither with lanterns, and torches, and weapons.
- Young's Literal Translation (YLT)
- Judas, therefore, having taken the band and officers out of the chief priests and Pharisees, doth come thither with torches and lamps, and weapons;
Read in context
- 1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- 2ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
- 3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
- 4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- 5ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
Cross references
- John 18:12 ಯೋಹಾನನು 18:12ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
- Luke 22:47–53 ಲೂಕನು 22:47–53ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು. ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು. ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ? ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- Psalm 3:1–2 ಕೀರ್ತನೆಗಳು 3:1–2ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- Acts 1:16 ಅಪೊಸ್ತಲರ ಕೃತ್ಯಗಳು 1:16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
- Psalm 22:12 ಕೀರ್ತನೆಗಳು 22:12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- Mark 14:43–50 ಮಾರ್ಕನು 14:43–50ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು. ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು. ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು. ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- John 13:27–30 ಯೋಹಾನನು 13:27–30ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು. ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು. ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- Matthew 26:47–56 ಮತ್ತಾಯನು 26:47–56ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು. ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ; ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
Original words (Greek)
- Judas · G2455Ἰούδας Ioúdas
- then · G3767οὖν oûn
- received · G2983λαμβάνω lambánō
- band · G4686σπεῖρα speîra
- and · G2532καί kaí
- officers · G5257ὑπηρέτης hypērétēs
- from · G1537ἐκ ek
- priests · G749ἀρχιερεύς archiereús
- and · G2532καί kaí
- Pharisees · G5330Φαρισαῖος Pharisaîos
- cometh · G2064ἔρχομαι érchomai
- thither · G1563ἐκεῖ ekeî
- with · G3326μετά metá
- lanterns · G5322φανός phanós
- and · G2532καί kaí
- torches · G2985λαμπάς lampás
- and · G2532καί kaí
- weapons · G3696ὅπλον hóplon